ಬೆಂಗಳೂರು: ದೆಹಲಿಯಿಂದ ಮರಳುತ್ತಿದ್ದಂತೆ ಯತ್ನಾಳ್ ಮತ್ತು ಟೀಮ್ ಹೈ ಹೈವೋಲ್ಟೇಜ್ ಮೀಟಿಂಗ್ ನಡೆಸಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ವೊಂದರಲ್ಲಿ ಲಿಂಗಾಯತ ನಾಯಕರ ಸಭೆ ನಡೆದಿದೆ. ಯತ್ನಾಳ್, ಜಿ.ಎಂ. ಸಿದ್ದೇಶ್ವರ, ಬಿ.ಪಿ. ಹರೀಶ್ ನೇತೃತ್ವದಲ್ಲಿ ಲಿಂಗಾಯತ ಮುಖಂಡರ ಸಭೆ ನಡೆದಿದೆ.
ಇತ್ತೀಚೆಗಷ್ಟೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಶೈವ ಲಿಂಗಾಯತರ ಸಭೆ ನಡೆಸಿದ್ದರು. ಈ ವೇಳೆ ಲಿಂಗಾಯತ ನಾಯಕತ್ವ, ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಸಳಿಸುವ ವಿಚಾರದ ಕುರಿತು ಚರ್ಚೆ ನಡೆಸಲಾಗಿತ್ತು. ಇಂದು ಕೂಡ ಈ ಸಭೆ ನಡೆದಿದ್ದು, ಮುಂದಿನ ನಡೆ, ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ, ಮತ್ತೊಮ್ಮೆ ದೆಹಲಿಗೆ ಲಿಂಗಾಯತ ಮುಖಂಡರ ನಿಯೋಗ ಕೊಂಡೊಯ್ಯುವ ಬಗ್ಗೆ ಚರ್ಚೆ