ಬೆಂಗಳೂರು: ನಗರದಲ್ಲಿ ಪುಡಿರೌಡಿಗಳ ಅಟ್ಟಹಾಸ ಮುಂದುವರೆದಿದೆ. ಕುಡಿದ ಮತ್ತಿನಲ್ಲಿ ರಸ್ತೆ ಬದಿ ಪಾರ್ಕ್ ಮಾಡಿದ್ದ ವಾಹನಗಳ ಮೇಲೆ ಲಾಂಗ್ ಬೀಸಿ ಪುಂಡಾಟ ಮೆರೆದಿದ್ದಾರೆ.
ಆಟೋದಲ್ಲಿ ಬಂದ ಐದಾರು ಮಂದಿ ಪುಡಿರೌಡಿಳು, ಬ್ಯಾಡರಹಳ್ಳಿಯ ವಾಲ್ಮೀಕಿ ನಗರದಲ್ಲಿ ಇಪ್ಪತ್ತು ವಾಹನಗಳ ಗ್ಲಾಸ್ ಗಳನ್ನು ಪುಡಿ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಅನ್ನಪೂರ್ಣೇಶ್ವರಿ ನಗರದ ಮುದ್ದಿನಪಾಳ್ಯದ ಬಳಿಯೂ ಕೂಡ ಐದಾರು ವಾಹನಗಳ ಗ್ಲಾಸ್ ಗಳನ್ನ ಹೊಡೆದಿದ್ದಾರೆ.
ಈ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


















