ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನೀಲಕಂಠನಹಳ್ಳಿ ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ದೊಡ್ಡ ಅವಾಂತರವೇ ಸಂಭವಿಸಿದೆ.
ಬಲವಾದ ಗಾಳಿ ಮತ್ತು ಮಳೆಯಿಂದ ಗ್ರಾಮದಲ್ಲಿರುವ ಶಿವಣ್ಣ ಅವರಿಗೆ ಸೇರಿದ ಕೋಳಿ ಹಾಗೂ ಕುರಿ ಸಾಕಾಣಿಕೆ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ. ಇದರಿಂದ ಸಾಕಾಣಿಕೆ ಘಟಕಕ್ಕೆ ಭಾರೀ ಹಾನಿಯಾಗಿದೆ.
ಘಟನೆಯ ಪರಿಣಾಮವಾಗಿ ಸುಮಾರು 2 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಹಾನಿಗೊಳಗಾದ ಶಿವಣ್ಣ ಅವರಿಗೆ ತಕ್ಷಣ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಈ ಘಟನೆ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಚಿಕ್ಕಮಗಳೂರಿಗೆ ಸಿಎಂ ಪ್ರವಾಸ : ಏ.13ಕ್ಕೆ ಹಂದೂರು ಸೇತುವೆ ಉದ್ಘಾಟನೆ



















