ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅಶ್ಲೀಲ ವಿಡಿಯೋ ಎಡಿಟರ್ಸ್ ಹಾವಳಿ ಹೆಚ್ಚಾಗಿದ್ದು, ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣದ ಬಳಕೆ ಹೆಚ್ಚಾಗುತ್ತಿದ್ದು, ಅದರ ದುರ್ಬಳಕೆ ಕೂಡ ಅಷ್ಟೇ ಹೆಚ್ಚಾಗುತ್ತಿದೆ. ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಫೋಟೋ, ವಿಡಿಯೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಅಪ್ಲೋಡ್ ಮಾಡಿರುವ ಘಟನೆ ನಡೆದಿದೆ. ಈ ರೀತಿ ಎಡಿಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ.
ತಸೀನಾ ಖಾನ್ ಎಂಬುವವರ ಫೋಟೋ, ವಿಡಿಯೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಕಿಡಿಗೇಡಿಗಳು ವೈರಲ್ ಮಾಡಿದ್ದಾರೆ ಎನ್ನಲಾಗಿದೆ. ತೌಸೀಫ್ ಜಾನ್, ಮೊಹಮ್ಮದ್ ಸಲ್ಮಾನ್, ಸ್ಟಾರ್ ಡಿಜೆ, ರೆಡ್ ಬುಲ್, ಖಾನ್ ಕಿ ಜಾನ್ ಅನ್ನೋ ಇನ್ಸ್ ಟಾ ಗ್ರಾಮ್ ಐಡಿಗಳಿಂದ ಎಡಿಟ್ ಮಾಡಿ ವೈರಲ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಅಲ್ಲದೇ, ತಸೀನಾ ತಾಯಿಗೂ ಅಶ್ಲೀಲವಾಗಿ ಕಿಡಿಗೇಡಿಗಳು ನಿಂದಿಸಿದ್ದಾರೆ ಎನ್ನಲಾಗಿದೆ. ವಿವಿಧ ಐಡಿಗಳಿಂದ ಎಡಿ ಮಾಡಿ ಶೇರ್ ಮಾಡಿದ್ದಾರೆ. ತಸೀನಾರ ವಿಡಿಯೋ, ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಕಳುಹಿಸಿದ್ದಾರೆ ಎಂದು ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ಎನ್ನಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಗೋವಿಂದಪುರ ಠಾಣಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.