ತುಮಕೂರು: ಚಿನ್ನದ ಸರಕ್ಕಾಗಿ ವೃದ್ಧೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ.
ರಾತ್ರಿ ವೇಳೆ ದೇವರ ಉತ್ಸವ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ವೃದ್ಧೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಈ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ(Bukkapatna) ಹೋಬಳಿಯ ಜೋಗಯ್ಯನ ಪಾಳ್ಯದಲ್ಲಿ ನಡೆದಿದೆ.
ಮದ್ದಮ್ಮ (68) ಸಾವನ್ನಪ್ಪಿದ ದುರ್ದೈವಿ ವೃದ್ಧೆ. ಪಕ್ಕದ ಹುಣಸೆಕಟ್ಟೆ ಗ್ರಾಮದಲ್ಲಿ ನಡೆದ ದೇವರ ಉತ್ಸವ ಮುಗಿಸಿ, ರಾತ್ರಿ ಮನೆಗೆ ತೆರಳುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ಹಂತಕರು ವೃದ್ದೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಅವರ ಮೈಮೇಲಿದ್ದ ಚಿನ್ನದ ಸರ ಕದ್ದು, ಶವವನ್ನು ನಿರ್ಮಾಣ ಹಂತದ ಕಟ್ಟಡದ ಹತ್ತಿರ ಎಸೆದು ಪರಾರಿಯಾಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಶಿರಾ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ಈಗ ತನಿಖೆ ನಡೆಸುತ್ತಿದ್ದಾರೆ. ದಾಖಲಿಸಿದ್ದಾರೆ. ರವಾನಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ.