ಬೆಂಗಳೂರು: ಪಾಪಿ ಮಗನೊಬ್ಬ ತಾಯಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರು (Bengaluru) ಹೊರವಲಯದ ಸೂರ್ಯಸಿಟಿ ಹತ್ತಿರ ಇರುವ ಹಳೆ ಚಂದಾಪುರದಲ್ಲಿ ಈ ಘಟನೆ ನಡೆದಿದೆ. ಮಹಾಲಕ್ಷ್ಮಿ (41) ಕೊಲೆಯಾಗಿರುವ ದುರ್ದೈವ ತಾಯಿ. ರಮೇಶ್ (21) ತಾಯಿಯನ್ನ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಮಗ. ಮೂಲತಃ ಚಿತ್ರದುರ್ಗ ಜಿಲ್ಲೆಯವರಾದ ಈ ಕುಟುಂಬಸ್ಥರು ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದರು ಎನ್ನಲಾಗಿದೆ.
ಆದರೆ, ಮಗನಿಗೆ ಕುಡಿತದ ಚಟ ಶುರುವಾಗಿತ್ತ. ಶನಿವಾರ ರಾತ್ರಿಯೂ ಕುಡಿದು ಬಂದು ತಾಯಿ ಮಹಾಲಕ್ಷ್ಮಿ ಜೊತೆ ಗಲಾಟೆ ಮಾಡಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಮೊಬೈಲ್ ಚಾರ್ಜಿಂಗ್ ವೈರ್ ನಿಂದ ತಾಯಿಯ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ.
ಆನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರ ಮತ್ತು ಬೆಂಗಳೂರು ಗ್ರಾಮಾಂತರ ಎಎಸ್ಪಿ ನಾಗೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.