ಬೆಂಗಳೂರು: ಇಲ್ಲಿಯ ವಿಶ್ಷವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಪಾವನ ಹೆಚ್.ಎನ್(23) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ ಎನ್ನಲಾಗಿದೆ. ಈ ವಿದ್ಯಾರ್ಥಿನಿಯು ಕನ್ನಡ ಅದ್ಯಯನದಲ್ಲಿ ದ್ವಿತಿಯ ವರ್ಷದ ಸ್ನಾತಕೋತ್ತರ ವ್ಯಾಸಾಂಗ ಮಾಡುತ್ತಿದ್ದಳು. ಸೋಮವಾರ ಮಧ್ಯಾಹ್ನ 12ರ ವೇಳಗೆ ಲೇಡಿಸ್ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇದನ್ನು ಗಮನಿಸಿದ ಹಾಸ್ಟೆಲ್ ನಲ್ಲಿದ್ದ ಕೆಲವು ಯುವತಿಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.