ಬೆಂಗಳೂರು: ನಟ ನಕುಲ್ ಗೌಡ, ಮಾನ್ವಿತ ಹರೀಶ್ ಅಭಿನಯದ ಬ್ಯಾಡ್ ಚಿತ್ರದ ಟೀಸರ್ ಇತ್ತೀಚೆಗೆ ಅನಾವರಣಗೊಂಡಿತು.
ಪಿ.ಸಿ.ಶೇಖರ್ ನಿರ್ದೇಶನದ ಈ ಚಿತ್ರ ಮಾರ್ಚ್ 28 ರಂದು ಬಿಡುಗಡೆಯಾಗಲು ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರ ಟೀಸರ್ ಬಿಡುಗಡೆ ಮಾಡಲಾಯಿತು. ಎಸ್.ಆರ್. ವೆಂಕಟೇಶ್ ಗೌಡ ನಿರ್ಮಾಣ ಮಾಡಿದ್ದಾರೆ. ಪಿ.ಸಿ. ಶೇಖರ್ ನಿರ್ದೇಶನದಲ್ಲಿ “ಪ್ರೀತಿಯ ರಾಯಭಾರಿ” ಖ್ಯಾತಿಯ ನಕುಲ್ ಗೌಡ ನಾಯಕನಾಗಿ ನಟಿಸಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ರಾಜಕೀಯ ಮುಖಂಡರಾದ ಬಿ.ಕೆ.ಶಿವರಾಮ್ ಮುಖ್ಯ ಅತಿಥಿಗಳಾಗಿ ಆಗಮಿಸಿ, ಟೀಸರ್ ಬಿಡುಗಡೆ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ನಿರ್ದೇಶಕ ಪಿ.ಸಿ. ಶೇಖರ್, ಇದು ವಿಭಿನ್ನ ಚಿತ್ರಕಥೆಯುಳ್ಳ ಚಿತ್ರ. ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳು ಈ ಚಿತ್ರದಲ್ಲಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಹಾಡುಗಳು ಈಗಾಗಲೇ ಎಲ್ಲರ ಮನ ಗೆದ್ದಿದೆ. ಇಂದು ಟೀಸರ್ ಬಿಡುಗಡೆಯಾಗಿದೆ. ಚಿತ್ರ ಇದೇ ತಿಂಗಳ 28 ರಂದು ತೆರೆಗೆ ಬರಲಿದೆ. ಕಲಾವಿದರು ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಉತ್ತಮವಾಗಿ ಬಂದಿದೆ ಎಂದಿದ್ದಾರೆ.
ನನ್ನ ಹಿಂದಿನ “ಪ್ರೀತಿಯ ರಾಯಭಾರಿ” ಚಿತ್ರದಿಂದಲೂ ತಾವು ನೀಡುತ್ತಿರುವ ಪ್ರೋತ್ಸಾಹಕ್ಕೆ ಧನ್ಯವಾದ. ಪಿ.ಸಿ.ಶೇಖರ್ ಅವರ ನಿರ್ದೇಶನದಲ್ಲಿ ಈ ಚಿತ್ರ ಚೆನ್ನಾಗಿ ಬಂದಿದೆ. ಪ್ರೇಕ್ಷಕರು ಕೊಟ್ಟ ದುಡ್ಡಿಗೆ ಮೋಸ ಆಗದಂತಹ ಚಿತ್ರವಿದು. ನನ್ನ ಪಾತ್ರ ಕೂಡ ವಿಭಿನ್ನವಾಗಿದೆ. ದಯವಿಟ್ಟು ಎಲ್ಲರೂ ನಮ್ಮ ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡಿ ಎಂದು ನಾಯಕ ನಕುಲ್ ಗೌಡ ಹೇಳಿದ್ದಾರೆ.

ಪಿ.ಸಿ.ಶೇಖರ್ ಅವರ ನಿರ್ದೇಶನದ ಹಿಂದಿನ ಚಿತ್ರಗಳು ಚೆನ್ನಾಗಿತ್ತು. ಅವರ ನಿರ್ದೇಶನದ ನಮ್ಮ “BAD” ಚಿತ್ರ ಸಹ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ ಎಂದರು ನಿರ್ಮಾಪಕ ಎಸ್ ಆರ್ ವೆಂಕಟೇಶ್ ಗೌಡ ಹೇಳಿದ್ದಾರೆ.
ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರುಪಾತ್ರಗಳಲ್ಲಿ ನಾನು ಒಂದು ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ನಟಿ ಅಪೂರ್ವ ಭಾರದ್ವಾಜ್ ತಿಳಿಸಿದರು.
ಚಿತ್ರದಲ್ಲಿ ನಟಿಸಿರುವ ಅಶ್ವಿನಿ, ಪದ್ಮ ಶಿವಮೊಗ್ಗ, ಮಂಜುನಾಥ್ ಮುಂತಾದವರು ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು.