ಬೆಂಗಳೂರು: ಸಿಎಂ ಮನೆ ಮುಂದೆ ವ್ಹೀಲಿಂಗ್ ಮಾಡುತ್ತಿದ್ದ ಪುಂಡನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.
ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಮಾರ್ಚ್ 28 ರಂದು ರಾತ್ರಿ ಪುಂಡರು ವ್ಹೀಲಿಂಗ್ ಮಾಡುತ್ತಿದ್ದರು. ಸಿಎಂ ಮನೆ ರಸ್ತೆಯಿಂದ ಬಿಡಿಎ ರಸ್ತೆಯಲ್ಲಿ ಪುಂಡರು ವ್ಹೀಲಿಂಗ್ ಮಾಡುತ್ತಿದ್ದರು. ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದರು. ಈ ಕುರಿತು ವಿಡಿಯೋ ವೈರಲ್ ಆಗುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಓರ್ವನನ್ನು ಬಂಧಿಸಿ, ಬೈಕ್ ಜಪ್ತಿ ಮಾಡಿದ್ದಾರೆ. ಈ ಕುರಿತು ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.