ಬೆಂಗಳೂರು : ವೃಕ್ಷಮಾತೆ, ಮರಗಳನ್ನ ಮಕ್ಕಳಂತೆ ಬೆಳೆಸಿದ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ ಬೆಂಗಳೂರಿನ ಜ್ಞಾನಭಾರತಿಯ ಕಲಾಗ್ರಾಮದ ಆವರಣದಲ್ಲಿ ನೆರೆವೇರಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಾಲು ಮರದ ತಿಮ್ಮಕ್ಕ ಅವ್ರು ನಿನ್ನೆ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಇಂದು ಅಂತಿಮ ನಮನದ ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಜ್ಞಾನ ಭಾರತಿಯ ಕಲಾಗ್ರಾಮದ ಆವರಣದಲ್ಲಿ ಡಾ.ಸಿದ್ದಲಿಂಗಯ್ಯ ಅವರ ಸಮಾಧಿ ಪಕ್ಕದಲ್ಲೇ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನಡೆದಿದೆ. ಅವರ ದತ್ತು ಪುತ್ರ ಅಂತ್ಯಕ್ರಿಯೆ ವಿಧಿ ವಿಧಾನಗಳನ್ನ ನೆರವೇರಿಸಿದ್ದಾರೆ. ಕುಶಾಲ ತೋಪು ಸಿಡಿಸಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಗಿದೆ.
ಸಾಲು ಮರದ ತಿಮ್ಮಕ್ಕ ನೆಟ್ಟ ಮರಗಳೆಷ್ಟು?
ಕುದೂರಿನಿಂದ ಹುಲಿಕಲ್ ತನಕ ಇರುವ ರಾಜ್ಯ ಹೆದ್ದಾರಿ 94ರಲ್ಲಿ ತಿಮ್ಮಕ್ಕ ಹಾಗೂ ಅವರ ಪತಿ ಸೇರಿಕೊಂಡು ಆಲದ ಸಸಿಗಳನ್ನು ನೆಟ್ಟಿದ್ದಾರೆ. ವರ್ಷದಿಂದ ವರ್ಷಕ್ಕೆ ಮರಗಳನ್ನು ನೆಡುವ ಕಾರ್ಯ ಹೆಚ್ಚಿಸಿದ ತಿಮ್ಮಕ್ಕ, ತಮ್ಮ ಸ್ವಂತ ಖರ್ಚಿನಲ್ಲಿ 8000 ಸಸಿಗಳನ್ನು ನೆಟ್ಟಿದ್ದಾರೆ. ಇಂದಿಗೆ ಅವುಗಳ ಮೌಲ್ಯವು ಸುಮಾರು 15ಕ್ಕೂ ಲಕ್ಷ ಅಧಿಕ ರೂಪಾಯಿ ಎಂದು ಅಂದಾಜಿಸಲಾಗಿದೆ. ಸದ್ಯಕ್ಕೆ ಈ ಮರಗಳ ನಿರ್ವಹಣೆಯನ್ನು ರಾಜ್ಯವೇ ಸರ್ಕಾರವೇ ವಹಿಸಿಕೊಂಡಿದೆ.
ಇದನ್ನೂ ಓದಿ : ಬಾಲಿವುಡ್ ನಟ ರಾಜ್‌ಕುಮಾರ್ ರಾವ್ ದಂಪತಿಗೆ ಹೆಣ್ಣು ಮಗು ಜನನ | ಪೋಸ್ಟ್ ವೈರಲ್



















