ಉಡುಪಿ : ಧರ್ಮಸ್ಥಳ ವಿಚಾರದಲ್ಲಿ ಡಿಸಿಎಂ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಈ ಹೇಳಿಕೆಯ ಬಗ್ಗೆ ನನ್ನ ಸಹಮತವು ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಉಡುಪಿಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ಹೆಬ್ಬಾಳ್ಕರ್, ನಾವೆಲ್ಲರೂ ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರದ ಭಕ್ತರು. ಧರ್ಮಸ್ಥಳ ಪ್ರಕರಣವನ್ನು ಎಸ್ ಐ ಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ತನಿಖೆ ಬಗ್ಗೆ ಅಧಿಕಾರಿಗಳು ಗೃಹಸಚಿವರಿಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಧರ್ಮಸ್ಥಳದಲ್ಲಿ ನಡೆದಿರುವ ಪ್ರಕರಣಗಳ ಸತ್ಯಾಸತ್ಯತೆ ಎಸ್.ಐ.ಟಿ ತನಿಖೆಯಿಂದ ಹೊರಬರುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಕ್ಷೇತ್ರ ಮತ್ತು ಧರ್ಮಾಧಿಕಾರಿಗಳ ವಿರೋಧ ಅವಹೇಳನ ನಡೆಯುತ್ತಿದ್ದು, ಸೌಜನ್ಯಳಿಗೆ ಅನ್ಯಾಯ ಆಗಿದ್ದರೆ ನ್ಯಾಯ ಸಿಗಬೇಕು ಎಂದಿದ್ದಾರೆ.
ಮುಸಕುದಾರಿ ಬೇರೆ ಬೇರೆ ಸ್ಥಳವನ್ನು ಗುರುತು ಮಾಡುತ್ತಿದ್ದಾನೆ. ಇದಕ್ಕೆಲ್ಲ ಉತ್ತರ ಸಿಗಬೇಕಂದೆ ಎಸ್ ಐ ಟಿ ರಚನೆಯಾಗಿದೆ ಎಲ್ಲದಕ್ಕೂ ಆದಷ್ಟೂ ಬೇಗ ಉತ್ತರ ಸಿಗಲಿದೆ ಎಂದು ಹೇಳಿದ್ದಾರೆ.