ಸಂಸತ್ ಸದಸ್ಯರಾಗಿ ಕೇಂದ್ರ ಸಚಿವರಾಗಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕುಮಾರಸ್ವಾಮಿ ಅವರು ಚನ್ನಪಟ್ಟಣ (Channapatna) ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಈಗ ಲೋಕಸಭೆ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ರಾಜೀನಾಮೆ ನೀಡಿದ್ದಾರೆ. ಇಂದು ಸ್ಪೀಕರ್ ಯಟಿ ಖಾದರ್ (UT Khader) ಕೊಠಡಿಗೆ ಆಗಮಿಸಿ ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಿದರು.
ಲೋಕಸಭಾ ಚುನಾವಣೆಯಲ್ಲಿ (Lok Sabha Election) ಮಂಡ್ಯದಿಂದ (Mandya) ಗೆದ್ದ ಕುಮಾರಸ್ವಾಮಿ ಮೋದಿ ಸಂಪುಟದಲ್ಲಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿದ್ದಾರೆ. ರಾಜೀನಾಮೆಗೂ ಮುನ್ನ ಕುಮಾರಸ್ವಾಮಿ ತಿರುಪತಿಗೆ ತೆರಳಿ ತಮ್ಮಪ್ಪನ ದರ್ಶನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಸಚಿವನಾಗಿ ನನ್ನ ಕೆಲಸ ಯಶಸ್ವಿಯಾಗಲು ವೆಂಕಟೇಶ್ವರನ ಆಶೀರ್ವಾದ ಪಡೆಯಲು ನಾನು ಬಂದಿದ್ದೇನೆ ಎಂದು ಹೇಳಿದ್ದರು.
