ಬೆಂಗಳೂರು: ಪೊಲೀಸರು ಎಷ್ಟೇ ಕಠಿಣ ನಿಯಮ ಜಾರಿಗೆ ತಂದರೂ ಸಿಲಿಕಾನ್ ಸಿಟಿಯಲ್ಲಿ ಪುಂಡರ ಅಟ್ಟಹಾಸ ನಿಲ್ಲುತ್ತಿಲ್ಲ. ಆದರೂ ವ್ಹೀಲಿಂಗ್ ಪುಂಡರ ಹಾವಳಿ ಮಾತ್ರ ನಿಲ್ಲುತ್ತಿಲ್ಲ.
ದಿನದಿಂದ ದಿನಕ್ಕೆ ವ್ಹೀಲಿಂಗ್ ಪುಂಡರ ಹಾವಳಿ ಹೆಚ್ಚಾಗುತ್ತಲೇ ಇದೆ. ಕನಕಪುರ ರಸ್ತೆಯಲ್ಲಿ ಯುವಕರ ಪುಂಡಾಟ ಮೊಬೈಲ್ ನಲ್ಲಿ ಸೆರೆಯಾಗಿದೆ. ಆರ್ಟ್ ಆಫ್ ಲಿವಿಂಗ್ ಬಳಿ ಶನಿವಾರ ಸಂಜೆ 4.30ರ ವೇಳೆಗೆ ಈ ಘಟನೆ ನಡೆದಿದೆ.
ಇಬ್ಬರು ಯುವಕರು ರಸ್ತೆ ಮಧ್ಯದಲ್ಲಿ ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್ ಮಾಡಿದ್ದಾರೆ.
KA 53 HE 6536 ನೋಂದಣಿ ಸಂಖ್ಯೆಯಾಗಿರುವ ಬೈಕ್ ನಲ್ಲಿ ಯುವಕರು ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದಾರೆ. ಯುವಕರ ವರ್ತನೆಗೆ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾದಾಚಾರಿಗಳು ಹಾಗೂ ವಾಹನ ಸವಾರರಿಗೆ ಇದು ಕಿರಿಕಿರಿ ಉಂಟು ಮಾಡುತ್ತಿದೆ. ಇಂತಹ ಪುಂಡರ ವಿರುದ್ಧ ಪೊಲೀಸರು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.