ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಸಂತ್ರಸ್ತೆ ಮತ್ತಷ್ಟು ಸ್ಫೋಟಕ ವಿಚಾರಗಳನ್ನು ಬಾಯಿ ಬಿಟ್ಟಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುನಿರತ್ನ ಮಾಜಿ ಮುಖ್ಯಮಂತ್ರಿಗಳೊಬ್ಬರನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ. ಮುನಿರತ್ನ ಹತ್ತಿರ ಮಾಜಿ ಮುಖ್ಯಮಂತ್ರಿಗಳ ವಿಡಿಯೋ ಇದೆ. ‘ಆ ವಿಡಿಯೋ ತೋರಿಸಿ’ ಬ್ಲ್ಯಾಕ್ಮೇಲ್ ಮಾಡಿಯೇ ಮುನಿರತ್ನ ಸಚಿವರಾಗಿದ್ದರು ಎಂದು ಆರೋಪಿಸಿದ್ದಾರೆ.
2020ರಲ್ಲಿ ಬಿಜೆಪಿ ಶಾಸಕ ಮುನಿರತ್ನ ಪರಿಚಯವಾಗಿದ್ದರು. ಮಮತಾ, ವೆಂಕಟೇಶ್ ಎಂಬುವರ ಮೂಲಕ ಪರಿಚಯವಾಗಿದ್ದರು. ಶಾಸಕ ಮುನಿರತ್ನ ನನಗೆ ವಿಡಿಯೋ ಕರೆ ಕೂಡ ಮಾಡಿದ್ದಾರೆ. ಒಮ್ಮೆ ಗೋದಾಮಿನ ಹತ್ತಿರ ಕರೆದುಕೊಂಡು ಹೋಗಿದ್ದರು. ಅಲ್ಲಿ ನನ್ನನ್ನು ಹೆದರಿಸಿ ಅತ್ಯಾಚಾರ ನಡೆಸಿದ್ದಾರೆ. ಅವರಿಗೆ ಜಾಮೀನು ಸಿಕ್ಕರೆ ನನಗೆ ಜೀವ ಭಯವಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಒಮ್ಮೆ ಅವರು ತಬ್ಬಿಕೊಳ್ಳಲು ಬಂದಿದ್ದರು. ಆಗ ನಾನು ದೂರ ತಳ್ಳಿ, ನೀವು ತಂದೆ ಸಮಾನ ಸರ್ ಎಂದಿದ್ದೆ. ಆಗ ದಿವಾನ್ ಕಾಟ್ ಮೇಲೆ ಕೂರಿಸಿದ್ದರು. ನನ್ನನ್ನು ಎಂಎಲ್ಎ ಆಗಿ ನೋಡುತ್ತಿದ್ದೀಯಾ, ನಾನೊಬ್ಬ ಕಾಂಟ್ರಾಕ್ಟರ್ ಎಂದು ಹೇಳಿದ್ದರು. ಆನಂತರ ಹೆದರಿಸಿ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾರೆ.
ಅವಳ ಬಳಿ ಹಲವಾರು ಖಾಸಗಿ ವಿಡಿಯೋಗಳಿವೆ. ಅವುಗಳನ್ನು ಇಟ್ಟುಕೊಂಡು ರಾಜಕೀಯ ಎದುರಾಳಿಗಳನ್ನು ಹಣಿಯುತ್ತಿದ್ದರು. ಅಲ್ಲೇದ, ಹನಿಟ್ರ್ಯಾಪ್ ಷಡ್ಯಂತ್ರ ಹೂಡುತ್ತಿದ್ದರು ಎಂದು ಸಂತ್ರಸ್ತೆ ಈಗಾಗಲೇ ಪೊಲೀಸರಿಗೆ ಹೇಳಿದ್ದಾರೆ.