ಇತ್ತೀಚೆಗೆ ಬೆಂಗಳೂರಿನಲ್ಲಿ ವ್ಹೀಲಿಂಗ್ ಹಾವಳಿಗೆ ಮಿತಿಯೇ ಇಲ್ಲದಂತಾಗಿದೆ. ನಗರದಲ್ಲಿ ಸಿನಿಮಾ ಸ್ಟೈಲ್ ನಲ್ಲಿ ಆಟೋ ವ್ಹೀಲಿಂಗ್ ಮಾಡಿರುವ ಘಟನೆ ನಡೆದಿದೆ.
ಇದನ್ನು ನೋಡಿ ವಾಹನ ಸವಾರರು ಬೆಚ್ಚಿ ಬಿದ್ದಿದ್ದಾರೆ. ಬೈಯಪ್ಪನ ಹಳ್ಳಿ ಮೆಟ್ರೋ ಸ್ಟೇಷನ್ ರಸ್ತೆಯಲ್ಲಿ ಯೂಟರ್ನ್ ತೆಗೆದುಕೊಳ್ಳೋಕೆ ಸಿನಿಮಾ ಸ್ಟೈಲ್‌ನಲ್ಲಿ ಆಟೋ ಚಾಲಕ ವ್ಹೀಲಿಂಗ್ ಮಾಡಿದ್ದಾನೆ. ವ್ಹೀಲಿಂಗ್ ಮಾಡುವ ವೇಳೆ ಹಿಂಬದಿ ಬರುತ್ತಿದ್ದ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆಟೋ ಚಾಲಕನ ಡೆಡ್ಲಿ ವ್ಹೀಲಿಂಗ್ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು, ಡೆಡ್ಲಿ ಆಟೋ ವೀಲಿಂಗ್ ಗೆ ಕಡಿವಾಣ ಹಾಕುವಂತೆ ಪೊಲೀಸರಿಗೆ ನೆಟ್ಟಿಗರು ಆಗ್ರಹಿಸಿದ್ದಾರೆ.



















