ಚಿಕ್ಕಬಳ್ಳಾಪುರ : ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಕಳ್ಳರ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾತ್ರಿ ವೇಳೆ ಮುಸುಕುಧಾರಿಗಳು ಓಡಾಡುತ್ತಿದ್ದು ಸ್ಥಳೀಯರ ನಿದ್ದೆಗೆಡಿಸಿದೆ.
ನಾಲ್ಕು ಜನ ಮುಸುಕು ಧರಿಸಿ ಮನೆಗಳ ಬಳಿ ಓಡಾಟ ನಡೆಸಿದ್ದಾರೆ. ಈ ಕಳ್ಳರ ಗ್ಯಾಂಗ್ ಕಳ್ಳತನಕ್ಕೆ ಹೊಂಚು ಹಾಕುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಅನುಮಾನಾಸ್ಪದವಾಗಿ ಸುತ್ತಾಡುತ್ತಿದ್ದ ನಾಲ್ಕು ಜನ ಕಳ್ಳರನ್ನು ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಗೌರಿಬಿದನೂರು ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.