ಬೆಂಗಳೂರು: ರಂಗಭೂಮಿ ಕಲಾವಿದ, ಚಿತ್ರ ನಟ, ಕಲಾ ನಿರ್ದೆಶಕರಾಗಿದ್ದ ದಿನೇಶ್ ಮಂಗಳೂರು ನಿಧನರಾಗಿದ್ದಾರೆ.
ದಿನೇಶ್ ಮಂಗಳೂರು ಅವರು ಕನ್ನಡ ಚಿತ್ರರಂಗದ ಪ್ರಮುಖ ಪೋಷಕ ನಟರಾಗಿದ್ದರು. ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು(ಸೋಮವಾರ) ಬೆಳಗಿನ ಜಾವ ಕುಂದಾಪುರದಲ್ಲಿ ಮೃತಪಟ್ಟಿದ್ದಾರೆ.
ಇಂದು ಸಂಜೆ ಪಾರ್ಥಿವ ಶರೀರ ಬೆಂಗಳೂರಿಗೆ ಬರಲಿದ್ದು, ನಾಳೆ ಸುಮನಹಳ್ಳಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ರಿಕ್ಕಿ, ಉಳಿದವರು ಕಂಡಂತೆ, ಕೆಜಿಎಫ್ ಚಾಪ್ಟರ್ 1, ಕೆಜಿಎಫ್ ಚಾಪ್ಟರ್ 2, 777 ಚಾರ್ಲಿ ಸೇರಿದಂತೆ ಹಲವು ಚಿತ್ರಗಳಲ್ಲಿ ದಿನೇಶ್ ಮಂಗಳೂರು ಅಭಿನಯಿಸಿದ್ದಾರೆ.



















