ಬೆಂಗಳೂರಿನಲ್ಲಿ ಮನೆ ಮುಂದೆ ಬೈಕ್ ನಿಲ್ಲಿಸುವ ಸಾರ್ವಜನಿಕರು ಎಚ್ಚರದಿಂದ ಇರಬೇಕಾದ ಘಟನೆ ಬೆಳಕಿಗೆ ಬಂದಿದೆ. ನಗರದ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್‌ಆರ್‌ಟಿಸಿ ಲೇಔಟ್‌ನ ಗಣೇಶ ದೇವಸ್ಥಾನದ ಹತ್ತಿರ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ನಿಂದ ಪೆಟ್ರೋಲ್ ಕಳ್ಳತನ ಮಾಡಲಾಗಿದೆ.
ರಾತ್ರಿ ವೇಳೆ ನಡೆದುಕೊಂಡು ಬರುವ ಆರೋಪಿಗಳು, ಸ್ವಲ್ಪ ಸಮಯ ಆ ಕಡೆ ಈ ಕಡೆ ಓಡಾಡಿಕೊಂಡು ನಿಲ್ಲಿಸಿದ ಬೈಕ್‌ನಿಂದ ಪೆಟ್ರೋಲ್ ಕದ್ದು ಸ್ಥಳದಿಂದ ಪರಾರಿಯಾಗುತ್ತಿದ್ದಾರೆ. ಖದೀಮರು ನಡೆಸಿದ ಈ ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸಂಪೂರ್ಣವಾಗಿ ಸೆರೆಯಾಗಿವೆ. ಸ್ವಲ್ಪ ಯಾಮಾರಿದರೂ ಬೈಕ್‌ನಲ್ಲಿದ್ದ ಪೆಟ್ರೋಲ್ ಕದಿಯುವ ಗ್ಯಾಂಗ್ ನಗರದಲ್ಲಿ ಸಕ್ರಿಯವಾಗಿದೆ.



















