ಬೆಂಗಳೂರು : ಅತಿ ಹೆಚ್ಚು ಅವಧಿಗೆ ರಾಜ್ಯದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಅತೀ ಹೆಚ್ಚು ಬಜೆಟ್ ಮಂಡಿಸಿದ ಜನಪ್ರತಿನಿಧಿ ಎಂದು ಈ ವರ್ಷ ದಾಖಲೆ ಬರೆದ ಸಿದ್ದರಾಮಯ್ಯ ಇದೀಗ ಸಿಎಂ ಪಟ್ಟದಿಂದ ಕೆಳಗೆ ಇಳಿಯುವುದಾಗಿ ಘೋಷಿಸಿದ್ದಾರೆ. ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಚಟುವಟಿಕೆಗೆ ಸದ್ಯ ತೆರೆ ಬಿದ್ದಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ನೇಮಕಗೊಳ್ಳುವ ಸಾಧ್ಯತೆ ಹೆಚ್ಚಿದೆ.
ಈ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಅಂದು, ಇಂದು, ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ, ಸಾರ್ವಜನಿಕರ ಸೇವೆಯೇ ನಮ್ಮ ಗುರಿ ಎಂದು ಮತ್ತೊಮ್ಮೆ ಒತ್ತಿ ಹೇಳಿದೆ. ಇಂದು ಬ್ರೇಕ್‌ಫಾಸ್ಟ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಪರಸ್ಪರ ಅಪ್ಪಿಕೊಂಡ ಮತ್ತು ಡಿಕೆಶಿ ಸಿಎಂ ಸಿದ್ದರಾಮಯ್ಯರ ಕಾಲಿಗೆ ಬಿದ್ದು ಆಶೀರ್ವಾದ ತೆಗೆದುಕೊಳ್ಳುತ್ತಿರುವ ಫೋಟೋಗಳನ್ನು ಕರ್ನಾಟಕ ಕಾಂಗ್ರೆಸ್ ಎಕ್ಸ್‌ನಲ್ಲಿ ಹಂಚಿಕೊಂಡು ಈ ಅಡಿಬರಹವನ್ನು ಬರೆದಿದೆ.
ಇದನ್ನೂ ಓದಿ : ಸಿದ್ದರಾಮಯ್ಯ ರಾಜೀನಾಮೆ – ಬಿಕ್ಕಿ ಬಿಕ್ಕಿ ಅತ್ತ ಸಚಿವ ಸಂತೋಷ್ ಲಾಡ್!



















