ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ಇಸ್ರೋ) ಖಾಲಿ ಇರುವ 320 ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ (ISRO Recruitment 2025) ಆಹ್ವಾನಿಸಲಾಗಿದೆ. ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ಸ್ ಎಂಜಿನಿಯರಿಂಗ್ ಮಾಡಿದವರಿಗೆ ಒಳ್ಳೆಯ ಅವಕಾಶಗಳಿವೆ. ಒಟ್ಟು 320 ಸೈಂಟಿಸ್ಟ್/ ಎಂಜಿನಿಯರ್ ಹುದ್ದೆಗಳಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನವಾಗಿದೆ.
ಯಾವ ಹುದ್ದೆ ಎಷ್ಟು ಖಾಲಿ?
ಸೈಂಟಿಸ್ಟ್/ಎಂಜಿನಿಯರ್ (ಎಲೆಕ್ಟ್ರಾನಿಕ್ಸ್) – 113
ಸೈಂಟಿಸ್ಟ್/ಎಂಜಿನಿಯರ್ (ಮೆಕ್ಯಾನಿಕಲ್) – 160
ಸೈಂಟಿಸ್ಟ್/ಎಂಜಿನಿಯರ್ (ಕಂಪ್ಯೂಟರ್ ಸೈನ್ಸ್) – 44
ಸೈಂಟಿಸ್ಟ್/ಎಂಜಿನಿಯರ್ (ಎಲೆಕ್ಟ್ರಾನಿಕ್ಸ್)-ಪಿಆರ್ಎಲ್ – 2
ಸೈಂಟಿಸ್ಟ್/ಇಂಜಿನಿಯರ್ (ಕಂಪ್ಯೂಟರ್ ಸೈನ್ಸ್)-ಪಿಆರ್ಎಲ್ – 1
ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 28 ವರ್ಷ ಎಂದು ತಿಳಿಸಲಾಗಿದೆ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಎಲ್ಲ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳಿಗೆ ಆಯ್ಕೆ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರವಿದೆ. ಇಲ್ಲಿಯೇ ಪರೀಕ್ಷೆ ನಡೆಯಲಿದೆ.
ಅಹ್ಮದಾಬಾದ್, ಭೋಪಾಲ್, ಚೆನ್ನೈ, ಗುವಾಹಟಿ, ಹೈದರಾಬಾದ್, ಕೋಲ್ಕತಾ, ಲಖನೌ, ಮುಂಬೈ, ನವದೆಹಲಿ ಮತ್ತು ತಿರುವನಂತಪುರಂನಲ್ಲಿ ಪರೀಕ್ಷೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 56,100 ರೂ. ಮಾಸಿಕ ವೇತನ ದೊರೆಯಲಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ. ಹೆಚ್ಚಿನ ಮಾಹಿತಿಗೆ isro.gov.inಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸುವುದು ಹೇಗೆ
- https://apps.ursc.gov.in/CentralBE-2025A/advt.jsp ಗೆ ಭೇಟಿ ನೀಡಿ
- ವೆಬ್ ಸೈಟ್ ನಲ್ಲಿ ನೋಂದಣಿ ಮಾಡಿಕೊಂಡು, ರಿಜಿಸ್ಟ್ರೇಷನ್ ನಂಬರ್ ಸೇವ್ ಮಾಡಿಟ್ಟುಕೊಳ್ಳಿ
- ಇ-ಮೇಲ್ ಐಡಿ ಸೇರಿ ಅಗತ್ಯ ಮಾಹಿತಿ ಒದಗಿಸಿ
- ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ
- ಬಳಿಕ ಸಬ್ ಮಿಟ್ ಆಯ್ಕೆ ಮಾಡಿ