ಬೆಂಗಳೂರು: ದೇಶದಲ್ಲೇ ಬೃಹತ್ ಬ್ಯಾಂಕ್ ಎನಿಸಿರುವ, ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ (SBI Specialist Cadre Officer Recruitment 2025) 33 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 33 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳು ಖಾಲಿ ಇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು: ಭಾರತೀಯ ಸ್ಟೇಟ್ ಬ್ಯಾಂಕ್ (SBI)
ಒಟ್ಟು ಹುದ್ದೆ: 33
ಹುದ್ದೆಗಳ ಹೆಸರು: ಸ್ಪೆಷಲಿಸ್ಟ್ ಕೇಡರ್ ಆಫೀಸರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜುಲೈ 31
ಬಿ.ಟೆಕ್, ಬಿಇ, ಎಂಇ, ಎಂ ಟೆಕ್, ಎಂಸಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು sbi.co.in ವೆಬ್ ಸೈಟ್ ಗೆ ಭೇಟಿ ನೀಡಬಹುದು. ಒಬಿಸಿ, ಜನರಲ್, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 750 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ಸೈಟ್ sbi.co.in ಗೆ ಭೇಟಿ ನೀಡಬೇಕು.
- Specialist Cadre Officer ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
- ಹುದ್ದೆಯ ಅಧಿಸೂಚನೆ ಓದಬೇಕು
- ಆನ್ಲೈನ್ ಅರ್ಜಿ ನಮೂನೆಯ ಲಿಂಕ್ ಓಪನ್ ಮಾಡಬೇಕು
- ಯಾವುದೇ ತಪ್ಪಿಲ್ಲದೆ ಎಲ್ಲ ವಿವರಗಳನ್ನು ಭರ್ತಿ ಮಾಡಬೇಕು
- ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
- ಫ್ಯೂಚರ್ ರೆಫರೆನ್ಸ್ ಗಾಗಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು



















