ಗದಗ : ಗದಗ ಜಿಲ್ಲೆಯಲ್ಲೂ ಸಿಲಿಂಡರ್‌ಗಾಗಿ ಹಾಹಾಕಾರ ಶುರುವಾಗಿದ್ದು, ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಸಿಲಿಂಡರ್‌ಗಾಗಿ ಕಿಲೋ ಮೀಟರ್‌ಗಟ್ಟಲೇ ಜನರು ಸಾಲು ನಿಂತಿದ್ದಾರೆ.
ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಇಂಡಿಯನ್ ಗ್ಯಾಸ್‌ಗಾಗಿ ಊಟ, ನಿದ್ದೆ ಬಿಟ್ಟು ನಸುಕಿನಿಂದಲೇ ಖಾಲಿ ಸಿಲಿಂಡರ್ ಸಮೇತ ಸಿದ್ದನಬಾವಿ ಓಣಿಯಲ್ಲಿರೋ ಇಂಡಿಯನ್ ಗ್ಯಾಸ್ ಏಜೆನ್ಸಿ ಮುಂದೆ ಕ್ಯೂ ನಿಂತಿದ್ದಾರೆ.
ಗ್ರಾಮೀಣ ಭಾಗದ ಜನ್ರು ಕೂಡ ಸಿಲಿಂಡರ್‌ಗಾಗಿ ಗೋಳಾಡುತ್ತಿದ್ದು, ಸಿಲಿಂಡರ್ ಸಿಗದೇ ಬಂಡಾಯದ ನಾಡಿನ ಜನ್ರ ಪರದಾಡುವಂತಾಗಿದೆ. ಬೆಳಗ್ಗೆ 8 ರಿಂದ 11 ಗಂಟೆವರೆಗೆ ಮಾತ್ರ ಪೂರೈಕೆಯಾಗುತ್ತಿದ್ದು, ಕಳೆದ ನಾಲ್ಕೈದು ದಿನಗಳಿಂದ ನರಗುಂದ ತಾಲೂಕಿನಲ್ಲಿ ಗೃಹಬಳಕೆ ಸಿಲಿಂಡರ್ ಸಮಸ್ಯೆ ಉಂಟಾಗಿದೆ.
ಒಂದೆಡೆ, ಸರ್ಕಾರ ಸಾರ್ವಜನಿಕರಿಗೆ ಗೃಹಬಳಕೆ ಸಿಲಿಂಡರ್ ಸಮಸ್ಯೆ ಇಲ್ಲ ಎನ್ನುತ್ತಿದೆ. ಆದರೆ ನರಗುಂದ ಪಟ್ಟಣದಲ್ಲಿ ನಾಲ್ಕೈದು ದಿನಗಳಿಂದ ತೀವ್ರ ಸಮಸ್ಯೆ ಉಂಟಾಗಿದೆ. ಇಷ್ಟೆಲ್ಲಾ ಸಮಸ್ಯೆ ಆಗುತ್ತಾ ಇದ್ದರು ಜಿಲ್ಲಾಡಳಿತಾ ಮತ್ತು ತಾಲೂಕಾಡಳಿತ ಮೌನವಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನೂ ಓದಿ : ಡಬಲ್ ಮರ್ಡರ್‌ಗೆ ಬೆಚ್ಚಿಬಿದ್ದ ಬೆಂಗಳೂರು.. ಮನೆಗೆ ಬಂದ ಅಕ್ಕ-ತಮ್ಮನನ್ನೇ ಕೊಚ್ಚಿ ಕೊಂದ ಅಪ್ರಾಪ್ತ ಬಾಲಕ!



















