ಬೆಂಗಳೂರು: “ಕಾಂತಾರಾ ಚಾಪ್ಟರ್ 1” ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎದು ಹೊಂಬಾಳೆ ಫಿಲಂಸ್ ಸ್ಪಷ್ಟನೆ ನೀಡಿದೆ.

ಈ ಹಿಂದೆ ಕಾಂತಾರಾ ಚಾಪ್ಟರ್ ಸಿನಿಮಾ ಅಕ್ಟೋಬರ್ 2ರಂದು ಬಿಡುಗಡೆ ಮಾಡಲಾಗುವುದು ಎಂದು ಹೊಂಬಾಳೆ ಫಿಲಂಸ್ ಘೋಷಿಸಿತ್ತು. ಆನಂತರ ಕೆಲವು ಗೊಂದಲಗಳು ಕೇಳಿ ಬಂದಿದ್ದವು. ಆದರೆ, ಈ ಕುರಿತು ಸ್ವತಃ ಹೊಂಬಾಳೆ ಫಿಲಂಸ್ ಸ್ಪಷ್ಟನೆ ನೀಡಿದೆ.

ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿರುವ ಹೊಂಬಾಳೆ ಫಿಲಂಸ್ ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅಧಿಕೃತವಾಗಿ ಸ್ಪಷ್ಟ ಪಡಿಸಿದೆ. ಯೋಜನೆಯಂತೆ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ. ಹಿಂದಿನ “ಕಾಂತಾರ” ಚಿತ್ರದ ಯಶಸ್ಸಿನ ನಂತರ “ಕಾಂತಾರ ಚಾಪ್ಟರ್ 1” ಸಹ ಪ್ರೇಕ್ಷಕರನ್ನು ಮತ್ತಷ್ಟು ಆಳವಾದ ಕಥೆ, ಸಂಸ್ಕೃತಿ ಮತ್ತು ದೈವಿಕ ಲೋಕಕ್ಕೆ ಕರೆದೊಯ್ಯಲಿದೆ ಎಂದು ಸಂಸ್ಥೆ ಹೇಳಿದೆ.
ನಿಮ್ಮ ಕಾತುರಕ್ಕೆ ತಕ್ಕಂತೆ ಚಿತ್ರವೂ ಅಂದುಕೊಂಡ ದಿನಾಂಕದಂದೆ ತೆರೆಗೆ ಬರಲಿದೆ ಎಂದು ಹೊಂಬಾಳೆ ಫಿಲಂಸ್ ತಿಳಿಸಿದೆ. ಆದರಿಂದ ಯಾವುದೇ ಅನಧಿಕೃತ ಮಾಹಿತಿಗಳಿಗೆ ಕಿವಿಗೊಡದೆ ಅಧಿಕೃತ ಪ್ರಕಟಣೆಗಳನ್ನಷ್ಟೆ ನಂಬಲು ಚಿತ್ರತಂಡ ಮನವಿ ಮಾಡಿದೆ.