ನವದೆಹಲಿ: ಭಾರತ ಕದನಕ್ಕೆ ರಾಜಿ ಆದರೂ ಭಯೋತ್ಪಾದನೆ ವಿರುದ್ಧ ಯಾವುದೇ ಕಾರಣಕ್ಕೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.
ಅಲ್ಲದೇ, ಈ ವೇಳೆ ಪಾಕಿಸ್ತಾನ (India Pakistan Conflict) ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಕುರಿತು ಒಪ್ಪಂದ ಮಾಡಿಕೊಂಡಿವೆ ಎಂದು ಸಚಿವ ಎಸ್.ಜೈಶಂಕರ್ (S.Jaishankar) ಸ್ಪಷ್ಟಪಡಿಸಿದ್ದಾರೆ.
ಎಕ್ಸ್‌ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ‘ಭಾರತವು ಭಯೋತ್ಪಾದನೆಯ ಎಲ್ಲ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವು ಹೊಂದಿದೆ. ಅಲ್ಲದೇ, ಅದು ಹಾಗೆಯೇ ಮುಂದುವರೆಯುತ್ತದೆ. ಭಾರತ ಮತ್ತು ಪಾಕ್ ತ್ವರಿತ ಶಾಂತಿ ಮಾತುಕತೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯಿಸಿದ್ದರು. ಅವರ ಮಧ್ಯಸ್ಥಿಕೆಯ ಹಿನ್ನೆಲೆಯಲ್ಲಿ ಕೊನೆಗೂ ಎರಡೂ ರಾಷ್ಟ್ರಗಳು ಒಪ್ಪಿಗೆ ಸೂಚಿಸಿವೆ.
ಎರಡು ದೇಶಗಳ ಕದನ ವಿರಾಮ ಒಪ್ಪಂದ ಆಗಿದೆ ಎಂದು ಡೊನಾಲ್ಡ್ ಟ್ರಂಪ್ ಎಕ್ಸ್ ಮೂಲಕ ತಿಳಿಸಿದ್ದಾರೆ. ಈಗ ಎರಡೂ ರಾಷ್ಟ್ರಗಳ ಗಡಿಯಲ್ಲಿ ಶಾಂತಿ ನೆಲೆಸಿದೆ.



















