ಮೈಸೂರು: ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ನಾನೇಕೆ ರಾಜೀನಾಮೆ ಕೊಡಲಿ? ಎಂದು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ತಪ್ಪು ಮಾಡಿಲ್ಲ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನನ್ನನ್ನು ಕಂಡರೆ ವಿಪಕ್ಷಗಳಿಗೆ ಭಯ. ಹೀಗಾಗಿ ನನ್ನನ್ನೇ ಟಾರ್ಗೆಟ್ ಮಾಡಲು ಮುಂದಾಗುತ್ತಿದ್ದಾರೆ ಎಂದು ಗುಡುಗಿದ್ದಾರೆ.
ನನ್ನ ರಾಜಕೀಯ ಜೀವನದಲ್ಲೇ ಇದು ಮೊದಲ ಕೇಸ್. ಇದು ಕೇವಲ ರಾಜಕೀಯ ಸಂಬಂಧದ ಕೇಸ್ ಮಾತ್ರ. ಅಂಡರ್ ಲೈನ್ ದಿಸ್ ವರ್ಡ್ ಎಂದು ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ದಾರೆ.
ಕಾನೂನು ಹೋರಾಟವನ್ನ ನಮ್ಮ ವಕೀಲರು ಮಾಡುತ್ತಾರೆ. ಮೈಸೂರಿನಲ್ಲಿ ಅಪಾರ ಸಂಖ್ಯೆಯ ಬೆಂಬಲಿಗರು ನನ್ನನ್ನು ಸ್ವಾಗತಿಸಲು ಬಂದಿದ್ದಾರೆ. ನಾನು ಯಾರನ್ನೂ ಕರೆದಿಲ್ಲ. ಅವರೇ ಪ್ರೀತಿಯಿಂದ ಬಂದಿದ್ದಾರೆ. ಇಂಥವರು ಇರುವಾಗ ನಾನು ಯಾರಿಗೂ ಯಾವುದಕ್ಕೂ ಹೆದರಲ್ಲ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಎಸಿಬಿಯೇ ಇದೆ.
ಇದಕ್ಕೆ ಯಾಕೆ ಕುಮಾರಸ್ವಾಮಿ ಮಾತನಾಡಲ್ಲ. ನಾನು ಲೋಕಾಯುಕ್ತವನ್ನ ಮುಚ್ಚಿಲ್ಲ. ಎಸಿಬಿ ರಚನೆ ಮಾಡಿದ್ದೇನೆ. ಹೇಗಾದರೂ ಮಾಡಿ ನನ್ನನ್ನು ಸಿಲುಕಿಸಲು ಯತ್ನಿಸುತ್ತಿದ್ದಾರೆ. ಆದರೆ, ನಾನು ಪ್ರಾಮಾಣಿಕ. ನನ್ನಿಂದ ಯಾವುದೇ ತಪ್ಪು ಆಗಲ್ಲ. ಆಗುವುದಿಲ್ಲ ಎಂದು ವಿರೋಧಿಗಳ ವಿರುದ್ಧ ಗುಡುಗಿದ್ದಾರೆ.