ತಿರುಪತಿಯಲ್ಲಿ ಹಿಂದೂಯೇತರರಿಗೆ ಕೆಲಸ ಇಲ್ಲ ಎಂದು ಟಿಟಿಡಿ ಹೇಳಿದೆ.
ಹೀಗಾಗಿ ಹಿಂದೂಯೇತರ ಸಮುದಾಯದ ನೌಕರಸ್ಥರು ಬೇರೆ ಕಡೆ ವರ್ಗಾವಣೆ ಮಾಡಿಸಿಕೊಳ್ಳಬಹದು ಅಥವಾ ಸ್ವಂಯ ನಿವೃತ್ತಿ ಪಡೆಯಬಹುದು ಎಂದು ನೂತನ ಟಿಟಿಡಿ ಹೇಳಿದೆ.
ಈ ಕುರಿತು ಮಾತನಾಡಿರುವ ಟಿಟಿಡಿಯ (TTD) ನೂತನ ಅಧ್ಯಕ್ಷ ಬಿ.ಆರ್. ನಾಯ್ಡು (BR Naidu), ಕೆಲಸ ಮಾಡುತ್ತಿರುವ ಹಿಂದೂಯೇತರರನ್ನು ಗುರುತಿಸಿ ಆಡಳಿತ ಮಂಡಳಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸುತ್ತದೆ. ಹಲವು ವರ್ಷಗಳಿಂದ, ದೇವಸ್ಥಾನ ಮಂಡಳಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಬೇಕು ಎಂದು ಕೂಗು ಕೇಳಿ ಬಂದಿತ್ತು. ಹೀಗಾಗಿ ಮೂರು ಬಾರಿ ಕಾಯ್ದೆ ತಿದ್ದುಪಡಿ ಮಾಡಲಾಗಿದೆ. ಈ ನಿಯಮಗಳ ಹೊರತಾಗಿಯೂ ಹಿಂದೂಯೇತರರು ದೇವಸ್ಥಾನದ ಒಳಗಡೆ ಕೆಲಸ ಮಾಡುವುದನ್ನು ಮುಂದುವರೆಸಿದ್ದಾರೆ.
ಮಂಡಳಿಯ 7 ಸಾವಿರ ಖಾಯಂ ಉದ್ಯೋಗಿಗಳ ಪೈಕಿ ಸುಮಾರು 1 ಸಾವಿರ ಅನ್ಯಧರ್ಮೀಯ ನೌಕರರಿದ್ದು, ಇವರಲ್ಲಿ ಕೆಲವರು ಟಿಟಿಡಿಯ ಖಾಯಂ ಹಾಗೂ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ತಿರುಮಲದಲ್ಲಿ ಕೆಲಸ ಮಾಡುತ್ತಿರುವ ಹಿಂದೂಯೇತರರ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುತ್ತೇವೆ. ಟಿಟಿಡಿ ಹಿಂದೂ ಧಾರ್ಮಿಕ ಸಂಸ್ಥೆಯಾಗಿದ್ದು, ದೇವಸ್ಥಾನದಲ್ಲಿ ಕೆಲಸ ಮಾಡಲು ಹಿಂದೂಯೇತರರನ್ನು ನೇಮಿಸಿಕೊಳ್ಳಬಾರದು ಎಂದು ಮಂಡಳಿ ಅಭಿಪ್ರಾಯಪಟ್ಟಿದೆ ಎಂದು ಹೇಳಿದ್ದಾರೆ.