ಬೆಂಗಳೂರು: ನಾಳೆ ಮಹಾವೀರ ಜಯಂತಿ ಇರುವ ಹಿನ್ನೆಲೆಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.
ಏ. 10(ಗುರುವಾರ)ದಂದು “ಮಹಾವೀರ ಜಯಂತಿ” ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಅದೇಶ ಹೊರಡಿಸಿದ್ದಾರೆ.