ಬೆಂಗಳೂರು : ಹೆಲ್ಮೆಟ್ ಹಾಕಿಕೊಂಡು ಬಂದ ಕಳ್ಳನೊಬ್ಬ ಮನೆಗೆ ನುಗ್ಗಿ ಗ್ಯಾಸ್ ಸಿಲಿಂಡರ್ ಕದ್ದೊಯ್ದ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ ಸುಮಾರು 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಳ್ಳನು ಮೊದಲು ಮನೆಯ ಗೇಟ್‌ಗಳು ಓಪನ್ ಇದೆಯೇ ಎಂದು ಪರಿಶೀಲಿಸಿದ್ದಾನೆ. ಗೇಟ್ ತೆರೆಯಲ್ಪಟ್ಟಿದ್ದ ಮನೆಯನ್ನು ಗುರಿಯಾಗಿಸಿಕೊಂಡು ಒಳಗೆ ಪ್ರವೇಶಿಸಿದ್ದಾನೆ. ನಂತರ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಅನ್ನು ತೆಗೆದುಕೊಂಡು, ತನ್ನ ಬೈಕ್ ಮೇಲೆ ಇಟ್ಟುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಪೂರ್ಣವಾಗಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆ ಬಗ್ಗೆ ಮಾಹಿತಿ ಪಡೆದ ಕಾಡುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.
ಇದನ್ನೂ ಓದಿ : ಕಲಬುರಗಿಯಲ್ಲಿ ದಲಿತ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ


















