ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದಲ್ಲಿನ ಕನ್ನಂಪಲ್ಲಿ ಬಡಾವಣೆಯಲ್ಲಿ ಕಳ್ಳರು ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ದೋಚಿದ ಘಟನೆ ನಡೆದಿದೆ.
ಪಶುವೈದ್ಯ ಮನೋಜ್ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದ್ದು, ಮನೆಯವರು ಹೊರಗಿದ್ದ ವೇಳೆ ಬೀಗ ಒಡೆದು ಕಳ್ಳರು ಒಳನುಗ್ಗಿದ್ದಾರೆ. ಕಳ್ಳರು ಸುಮಾರು 10.80 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡಿದ್ದಾರೆ. ಇದರಲ್ಲಿ 137 ಗ್ರಾಂ ಚಿನ್ನ, 750 ಗ್ರಾಂ ಬೆಳ್ಳಿ ಹಾಗೂ 60 ಸಾವಿರ ರೂ. ನಗದು ಸೇರಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಡಿವೈಎಸ್ಪಿ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ : ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!



















