ಮಂಡ್ಯ: ಕಳ್ಳರು ಕದ್ದ ಚಿನ್ನಾಭರಣವನ್ನು ಪೊಲೀಸರಿಗೆ ಹೆದರಿ ಮರಳಿ ನೀಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದೇಗೌಡ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಕುಟುಂಬಸ್ಥರು ಮನೆಯ ದೇವರ ದೇವಸ್ಥಾನಕ್ಕೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಮೇಲಿನ ಹೆಂಚು ತೆಗೆದು ಒಳ ನುಗ್ಗಿದ್ದ ಖದೀಮರು ಚಿನ್ನಾಭರಣ ದೋಚಿ ಪರಾರಿಯಾಗಿದ್ದರು.
ಕುಟುಂಬಸ್ಥರು ಮನೆಗೆ ಬಂದು ನೋಡಿದಾಗ ವಿಷಯ ಬೆಳಕಿಗೆ ಬಂದಿತ್ತು. ಹೀಗಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಆದರೆ, ದೂರು ನೀಡಿದ ಎರಡು ದಿನಗಳ ನಂತರ ಕಳ್ಳರು ಕದ್ದ ವಸ್ತುಗಳನ್ನು ಮನೆಯ ಮುಂದೆ ಇಟ್ಟು ಹೋಗಿದ್ದಾರೆ. ಇದನ್ನು ಕಂಡು ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. 50 ಗ್ರಾಂ ಚಿನ್ನದ ಸರ, 10 ಗ್ರಾಂ ಚೈನ್, 15 ಗ್ರಾಂ ಮೂರು ಜೊತೆ ಓಲೆಗಳನ್ನು ಮರಳಿ ಇಟ್ಟ ಹೋಗಿದ್ದಾರೆ.