ಹಾವೇರಿ: ಸಾರಿಗೆ ಬಸ್ ನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಕಳ್ಳಿಯರನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪೂರದಲ್ಲಿ ಈ ಘಟನೆ ನಡೆದಿದೆ. ಬಂಕಾಪೂರ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಇಬ್ಬರೂ ಅಂತಾರಾಜ್ಯ ಕಳ್ಳಿಯರನ್ನು ಬಂಧಿಸಿದ್ದಾರೆ.
ಕಸ್ತೂರಿ ಮತ್ತು ವೆನಿಲಾ ಬಂಧಿತರು ಎನ್ನಲಾಗಿದೆ. ಬಂಧಿತರು ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಮೂಲದವರಾಗಿದ್ದಾರೆ. ಸದ್ಯ ಬಂಕಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬಂಧಿತರಿಂದ ಒಂದು ಲಕ್ಷ 60 ಸಾವಿರ ರೂ ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ 2 ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ.