ಉಡುಪಿ : ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಏ.20ರಂದು ಬೆಳಿಗ್ಗೆ ನಡೆದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಕಳ್ಳರನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕಮಲಶಿಲೆ ಗ್ರಾಮದ ಎಳಬೇರು ನಿವಾಸಿ ಸಂದೀಪ ಆಚಾರಿ (28) ಹಾಗೂ ಕೊಪ್ಪಳ ಜಿಲ್ಲೆಯ ಬನಹಟ್ಟಿ ಗ್ರಾಮದ ಮುತ್ತಪ್ಪ ಶರಣಪ್ಪ ವಾಲಿಕರ್ (40) ಎಂದು ಗುರುತಿಸಲಾಗಿದೆ.
ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ ಪೌಳಿಗೆ ಬಂದು ಹುಂಡಿಯನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಮಾವಿನಕಾಯಿ ಕೊಯ್ಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು!



















