ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ಅವರಿಗೆ ಇಲ್ಲಿಯೇ ಸಂಭಾಳಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಅವರನ್ನು ದಿಢೀರನೇ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ. ಅವರನ್ನು ಹಂತ ಹಂತವಾಗಿ ದೆಹಲಿಗೆ ಕರೆಯಿಸಿಕೊಳ್ಳುವ ತಂತ್ರವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಓಬಿಸಿ ಸಲಹಾ ಮಂಡಳಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಿಸಿರುವ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಜೋಶಿ, ದೆಹಲಿ ರಾಜಕಾರಣಕ್ಕೆ ಸಿದ್ದರಾಮಯ್ಯ ಅವರನ್ನು ಕರೆಸಿಕೊಳ್ಳುವ ಉದ್ದೇಶದಿಂದ ಇಲ್ಲಿ ಜಾಗ ಖಾಲಿ ಮಾಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಪರೋಕ್ಷ ಸಂದೇಶ ರವಾನೆ ಮಾಡಿದೆ ಎಂದಿದ್ದಾರೆ.
ಮುಂದಿನ ಮುಖ್ಯಮಂತ್ರಿ ತಾನೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳುತ್ತಿದ್ದರೆ, ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಅವರು ನಾನೇ ಐದೂ ವಷಗಳ ಕಾಲ ಮುಖ್ಯಮಂತ್ರಿಯಾಗಿ ಇರುತ್ತೇನೆಂದು ಹೇಳುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಇರುವ ಯಾವ ರಾಜ್ಯಗಳಲ್ಲೂ ಅಲ್ಲಿನ ಮುಖ್ಯಮಂತ್ರಿಗಳು ಈ ರೀತಿ ಹೇಳುತ್ತಿಲ್ಲ ಎಂದು ಹೇಳಿದರು.