ಧಾರವಾಡ: ಈ ಸಂವತ್ಸರದಲ್ಲಿ ಒಳಿತಿಗಿಂತ ಕೆಡಕು ಹೆಚ್ಚಾಗಲಿದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ(Kodi Mutt Dr. Shivananda Shivayogi Rajendra Swamiji) ಭಯಾನಕ ಭವಿಷ್ಯ ನುಡಿದಿದ್ದಾರೆ.
ಈಗ ಕ್ರೋಧಿ ನಾಮ ಸಂವತ್ಸರ ನಡೆಯುತ್ತಿದೆ. ಈ ಸಂವತ್ಸರದಲ್ಲಿ ಒಳಿತಿಗಿಂತ ಕೆಡಕು ಹೆಚ್ಚಾಗಲಿದೆ. ಭೂಮಿ, ಅಗ್ನಿ, ಆಕಾಶ, ವಾಯು, ಜಲದಿಂದ ತೊಂದರೆ ಇದೆ. ಈ ಬಾರಿಯೂ ಭೂ ಕುಸಿತ, ಜಲಪ್ರಳಯ ಲಕ್ಷಣ ಇದೆ. ರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಕೂಡಿದ್ದಾರೆ. ಅಂಗಡಿ ಓಪನ್ ಆಗಿಲ್ಲ. ವ್ಯಾಪಾರ ಶುರುವಾಗಲಿ. ಆ ನಂತರ ರಾಷ್ಟ್ರ ರಾಜಕಾರಣದ ಭವಿಷ್ಯ ಹೇಳುವೆ. ಅಶುಭ ಈಗಲೇ ನುಡಿಯಬಾರದು. ಶುಭವೋ ಅಶುಭವೋ ಎಂದು ಶ್ರಾವಣದಲ್ಲಿ ಹೇಳುವೆ ಎಂದು ಸ್ಪಷ್ಟಪಡಿಸಿದರು.
ಮಹಾಭಾರತದಲ್ಲಿ ಅಭಿಮನ್ಯುವಿನ ಬಿಲ್ಲಿನ ದಾರ ಕರ್ಣನಿಂದ ತುಂಡರಿಸಿದ್ದರು. ಈಗ ಅಭಿಮನ್ಯುವಿನ ಹೆಂಡತಿ ಸಂಸತ್ ಪ್ರವೇಶ ಮಾಡುತ್ತಾಳೆ. ಆದರೆ ದುರ್ಯೋಧನನ ತೊಡೆ ಮುರಿಸಿದ ಕೃಷ್ಣ ಈಗ ಇಲ್ಲ. ಹೀಗಾಗಿ ದುರ್ಯೋಧನ ಗೆಲ್ಲುತ್ತಾನೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಕರೆಯದೆ ಬರುವುದು ಕೋಪ. ಬರೆಯದೇ ಓದುವವನು ಕಣ್ಣು. ಬರಗಾಲಿನಲ್ಲಿ ನಡೆಯುವವನ ಮನಸ್ಸು. ಈ ಮೂರು ನಿಯಂತ್ರಣದಲ್ಲಿಡಬೇಕು. ದುಡ್ಡು, ಅಧಿಕಾರ ಮುಖ್ಯ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.