ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣ (Prajwal Revanna)ಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ಹಂಚಿದವರಿಗೆ ಈಗ ನಡುಕ ಶುರುವಾಗಿದೆ.
ಅಶ್ಲೀಲ ವಿಡಿಯೋ ಹಂಚಿದವರ ವಿರುದ್ಧ ಎಸ್‌ಐಟಿ (SIT) ಅಧಿಕಾರಿಗಳು ಚಾರ್ಜ್‌ಶೀಟ್ ಸಲ್ಲಿಸಲು ತಯಾರಿ ನಡೆಸಿದ್ದು, ಆರೋಪಿಗಳಿಗೆ ನಡುಕ ಶುರುವಾಗಿದೆ. ಮುಂದಿನ ವಾರದೊಳಗಾಗಿ ಎಲ್ಲ ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ.
ಈಗಾಗಲೇ ಹೊಳೆನರಸಿಪುರ ಕೇಸ್‍ನಲ್ಲಿ ಪ್ರಜ್ವಲ್‍ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಸಿಐಡಿ ಸೈಬರ್ ಕ್ರೈಂನಲ್ಲಿ ದಾಖಲಾಗಿರುವ ಪ್ರಕರಣ ತೀರ್ಪಿನ ಹಂತದಲ್ಲಿದೆ. ಸಿಐಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಟ್ರಯಲ್ ಹಂತದಲ್ಲಿದೆ. ಮುಂದಿನ ವಾರ ಹಾಸನ ಜಿಲ್ಲೆಯಾದ್ಯಂತ ಪ್ರಜ್ವಲ್ ಬೇರೆ ಬೇರೆ ಮಹಿಳೆಯರ ಜೊತೆ ಇರುವ ಅಶ್ಲೀಲ ವಿಡಿಯೋ ಹಂಚಿದವರ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ ಮಾಡಲು ಎಸ್‍ಐಟಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ಹೀಗಾಗಿ ವಿಡಿಯೋ ಹರಿಬಿಟ್ಟವರಿಗೆ ತಕ್ಕಶಾಸ್ತಿ ಆಗಲಿದೆ.