ಉಡುಪಿ: ಈಜಲು ಹೋಗಿದ್ದ ಓರ್ವ ಯುವಕ ಹಾಗೂ ಮತ್ತೋರ್ವ ಅಪ್ರಾಪ್ತ ಬಾಲಕ ನೀರು ಪಾಲಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದಲ್ಲಿ ನಡೆದಿದೆ. ಈಜಲೆಂದು ಡ್ಯಾಮ್ ಗೆ ಹೋಗಿದ್ದ ಇಬ್ಬರೂ ನೀರು ಪಾಲಾಗಿದ್ದಾರೆ. ಶ್ರೀಶ(13), ಜಯಂತ್(19) ಸಾವನ್ನಪ್ಪಿರುವ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಭಾನುವಾರ ರಜೆ ಇದ್ದ ಹಿನ್ನೆಲೆಯಲ್ಲಿ ಗೆಳೆಯರ ಜೊತೆ ಈಜಲು ಇಬ್ಬರೂ ಹೋಗಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಶಂಕರನಾರಾಯಣ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ, ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.