ರಾಯಚೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಹೋಳಿ ಹಬ್ಬ ಆಚರಿಸಲಾಗುತ್ತಿದೆ. ಹೀಗೆ ಹೋಳಿಯಲ್ಲಿ ಮಿಂದೆದ್ದು, ಸ್ನಾನಕ್ಕೆಂದು ಕೆರೆಗೆ ಹೋದ ಇಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ರಾಯಚೂರು (Raichuru) ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ನೀರು ಪಾಲಾಗಿದ್ದಾರೆ. ತಾಲೂಕಿನ ಸುಲ್ತಾನಪುರ ಗ್ರಾಮದ ಹೊರವಲಯದಲ್ಲಿ ಹೊಂಡಕ್ಕೆ ಇಳಿದಿದ್ದ ಜಾಗೀರವೆಂಕಟಾಪುರ ಗ್ರಾಮದ ಸೋಮನಗೌಡ (45) ಶವವಾಗಿ ಪತ್ತೆಯಾಗಿದ್ದಾರೆ.ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನ ಆರ್‌ಡಿಎಸ್ ಕಾಲುವೆಗೆ ಸ್ನಾನಕ್ಕೆಂದು ಹೋಗಿದ್ದ ಯರಗೇರಾ ಗ್ರಾಮದ ಮಹಾದೇವ (30) ಕೂಡ ನಾಪತ್ತೆಯಾಗಿದ್ದಾರೆ. ಇಡಪನೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.