ಮುಂಬಯಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆಯ ಕರೆ ಬಂದಿದೆ.
ಮುಂಬಯಿ ಟ್ರಾಫಿಕ್ ಪೊಲೀಸರಿಗೆ ಈ ಕುರಿತು ಮೆಸೆಜ್ ಬಂದಿದೆ. ಪಾಕಿಸ್ತಾನದ ಪ್ರಧಾನ ಸಂಸ್ಥೆಯಾಗಿರುವ ಐಎಸ್ ಐ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿರುವ ಕುರಿತು ಮಾಹಿತಿ ನೀಡಿದೆ ಎನ್ನಲಾಗಿದೆ. ಮೆಸೆಜ್ ನಲ್ಲಿ ಬಾಂಬ್ ಸ್ಫೋಟಿಸಿ ಹತ್ಯೆಗೆ ಸ್ಕೆಚ್ ಹಾಕಲಾಗುವುದು ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.
ಅಲ್ಲದೇ, ಈ ಸಂದೇಶದಲ್ಲಿ ಇಬ್ಬರು ಪಾಕಿಸ್ತಾನಿ ಐಎಸ್ ಐ ಏಜೆಂಟರ್ ಗಳ ಹೆಸರು ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಮೆಸೆಜ್ ಕಳುಹಿಸಿದವರಿಗಾಗಿ ಬಲೆ ಬೀಸಿದ್ದಾರೆ. ಇತ್ತೀಚೆಗೆ ಪ್ರಧಾನಿ ಅವರಿಗೆ ಬೆದರಿಕೆಯ ಕರೆಗಳು ಹೆಚ್ಚಾಗಿ ಬರುತ್ತಿದ್ದು, ಪೊಲೀಸರು ಅಲರ್ಟ್ ಆಗಿದ್ದಾರೆ. ಇತ್ತೀಚೆಗಷ್ಟೇ ಬೆದರಿಕೆಯ ಕರೆ ಬಂದಿತ್ತು.