ಚಿಕ್ಕಮಗಳೂರು : ಜಿಲ್ಲೆಯ ಸಿಐಡಿ ಅರಣ್ಯ ಘಟಕದ ಪೊಲೀಸರು ಮತ್ತೊಂದು ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಜಿಂಕೆಯನ್ನು ಬೇಟೆಯಾಡಿದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಅತ್ತಿಗುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನು ವೆಂಕರಮಣ, ಕನ್ನಿಯಪ್ಪನ್ ಹಾಗೂ ಸುರೇಶ್ ಎಂದು ಗುರುತಿಸಲಾಗಿದೆ. ದತ್ತಪೀಠಕ್ಕೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆರೋಪಿಗಳು ಅರಣ್ಯಕ್ಕೆ ಅಕ್ರಮವಾಗಿ ನುಗ್ಗಿ ಜಿಂಕೆಯನ್ನು ಬೇಟೆಯಾಡಿದ್ದು, ಮೂವರನ್ನೂ ಬಂಧಿಸಿ, ತಮ್ಮ ವಶಕ್ಕೆ ಪಡೆದು ವಿಚಾರಣೆ ಆರಂಭಿಸಲಾಗಿದೆ.
ಕಾರ್ಯಾಚರಣೆ ವೇಳೆ ಆರೋಪಿಗಳು ಬೇಟೆಗೆ ಬಳಸಿದ್ದ ಆಯುಧಗಳು, ಇತರ ಉಪಕರಣಗಳು ಸೇರಿದಂತೆ ಹಲವು ಸಾಕ್ಷ್ಯಾಧಾರಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆರೋಪಿಗಳು ಈ ಹಿಂದೆ ಕೂಡ ಕಾಡು ಪ್ರಾಣಿ ಬೇಟೆಯಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತಾಗಿ ತನಿಖೆ ಮುಂದುವರೆದಿದೆ.
ಇದನ್ನೂ ಓದಿ : ಚಿಕ್ಕಮಗಳೂರಲ್ಲಿ ಮನಕಲಕುವ ಘಟನೆ – 1 ದಿನದ ಮಗುವನ್ನು ಪೊದೆಯಲ್ಲಿ ಬಿಟ್ಟು ಹೋದ ಪಾಪಿಗಳು


















