ತುಮಕೂರು: ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರದ ಕರ್ನೂಲ್ ಬಳಿ ನಡೆದಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ನವೀನ್ (48), ಬಿಜೆಪಿ ಮುಖಂಡ ಸಂತೋಷ್(35), ಲೋಕೇಶ್(38) ಮೃತ ದುರ್ದೈವಿಗಳು.
ಅಲ್ಲದೇ, ಮೂವರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರೂ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ನಿವಾಸಿಗಳು ಎನ್ನಲಾಗಿದೆ. ನವೀನ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಆರು ಜನ ಇನ್ನೋವಾ ಕಾರಿನಲ್ಲಿ ಮಂತ್ರಾಯಲಯಕ್ಕೆ ತೆರಳಿದ್ದರು. ದೇವರ ದರ್ಶನ ಮುಗಿಸಿ ವಾಪಾಸ್ ಬರುವಾಗ ಅಪಘಾತ ಸಂಭವಿಸಿದೆ.