ಧಾರವಾಡ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಹುಬ್ಬಳ್ಳಿಗೆ ತೆರಳುವ ವೇಳೆ ಈ ದುರಂತ ಸಂಭವಿಸಿದೆ. ಸದ್ಯ ಘಟನೆ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.