ಕಲಬುರಗಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮಹೇಶ್, ಪ್ರೇಮ್ ಕುಮಾರ್, ಅನ್ನದಾನಯ್ಯ ಸಾವನ್ನಪ್ಪಿದ್ದಾರೆ.
ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ನಿತ್ಯಾನಂದನನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗುಂಡಗೂರ್ತಿಯಿಂದ ಮದುವೆ ಕಾರ್ಡ್ ಕೊಡಲು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.