ಚಿಕ್ಕಬಳ್ಳಾಪುರ: ಒಂದೇ ಕುಟುಂಬದ ಮೂವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಕಂಬತ್ತನಹಳ್ಳಿ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ. ರಂಜಿತ್(27), ರಮ್ಯಾ(24), ಅಭಿಲಾಶ್(21) ಸಾವನ್ನಪ್ಪಿರುವ ದುರ್ದೈವಿಗಳು. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಂಬಂಧಿಕರು ಊಟಕ್ಕೆ ಸೇರಿದ್ದರು. ಊಟದ ನಂತರ ಈಜಾಡಲು ಕೆರೆಗೆ ಇಳಿದಿದ್ದಾರೆ. ಈ ವೇಳೆ ಮುಳುಗಿ ಸಾವನ್ನಪ್ಪಿದ್ದಾರೆ.
ರಾಮನಗರ ಮೂಲದ ರಮ್ಯಾ, ಚಂದಪುರ ಮೂಲದ ಅಭಿಲಾಷ್ ಮತ್ತು ಶ್ರೀನಿವಾಸಪುರ ಮೂಲದ ಎಸ್. ರಂಜೀತ್ ಕುಮಾರ್ ಸಾವನ್ನಪ್ಪಿರುವ ದುರ್ದೈವಿಗಳು. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.