ಉಡುಪಿ : ಬಾವಿಯ ಮಣ್ಣು ತೆಗೆಯಲು ಹೋಗಿ ಬಾವಿಗೆ ಬಿದ್ದ ಮೂವರನ್ನು ಅಗ್ನಿಶಾಮಕ ದಳ ರಕ್ಷಿಸಿದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಅಶ್ವಥಪುರದಲ್ಲಿ ನಡೆದಿದೆ.

ರಾಜೇಶ್ (42), ಪವನ್ (29) ಹಾಗೂ ಗೋಪಾಲ್ ನಾಯ್ಕ (52) ಎಂಬವರು ಬಾವಿಯ ಮಣ್ಣು ತೆಗೆಯಲೆಂದು ಬಾವಿಗಿಳಿದಿದ್ದು, ರಾಜೇಶ್ ಎಂಬುವರು ಮೇಲಕ್ಕೆ ಬರುವಾಗ ಬಿದ್ದು ಗಾಯಗೊಂಡಿದ್ದರು, ಇವರನ್ನು ರಕ್ಷಿಸಲು ಮುಂದಾದ ಪವನ್ ಹಾಗೂ ಗೋಪಾಲ್ ನಾಯ್ಕ ಕೂಡ ಬಾವಿಯಲ್ಲಿ ಸಿಲುಕಿಕೊಂಡಿದ್ದರು.

ತಕ್ಷಣವೇ ಕಾರ್ಕಳ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸಾಕಷ್ಟು ಪರಿಶ್ರಮಪಟ್ಟು ಬಾವಿಯೊಳಗೆ ಸಿಲುಕಿದ್ದ ಮೂವರನ್ನೂ ಸುರಕ್ಷಿತವಾಗಿ ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಗಾಯಗೊಂಡಿದ್ದ ರಾಜೇಶ್ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಸಮಯಕ್ಕೆ ಸರಿಯಾಗಿ ಸ್ಥಳಕ್ಕಾಗಮಿಸಿ ಜೀವ ಉಳಿಸಿದ ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿಯ ಕಾರ್ಯಕ್ಕೆ ಸ್ಥಳೀಯರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಇದನ್ನೂ ಓದಿ : ಪಡ್ಡೆ ಹುಡುಗರ ಹುಚ್ಚಾಟ – ಗಾಂಜಾ ಮತ್ತಲ್ಲಿ ಮಚ್ಚು ಹಿಡಿದು ಕಂಡ ಕಂಡವರ ಮೇಲೆ ಹಲ್ಲೆ!



















