ಹಾಸನ: ಶಾಲೆಗೆ ಹೋದ ಮೂವರು ವಿದ್ಯಾರ್ಥಿಗಳು (students)ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ.
ಹಾಸನ (Hassan) ಜಿಲ್ಲೆಯ ಸಕಲೇಶಪುರ (Sakaleshpura) ತಾಲೂಕಿನ ಕುನಿಗನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶರತ್ (16), ಧನಂಜಯ್ (16), ಮುರುಳಿ (16) ನಾಪತ್ತೆಯಾಗಿರುವ ವಿದ್ಯಾರ್ಥಿಗಳು.
ನಾಪತ್ತೆಯಾಗಿರುವ ವಿದ್ಯಾರ್ಥಿಗಳು ಕುನಿಗನಹಳ್ಳಿ ಗ್ರಾಪಂ ವ್ಯಾಪ್ತಿಯ ಆದರವಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ (Adarvalli Govt High School) ಎಸ್ಸೆಸ್ಸೆಲ್ಸಿ ಓದುತ್ತಿದ್ದರು. ಬುಧವಾರ ಬೆಳಗ್ಗೆ ಎಂದಿನಂತೆ ಶಾಲೆಗೆ (school) ಹೋಗುವುದಾಗಿ ಹೇಳಿ ಮನೆಯಿಂದ ಹೊರ ಹೋದವರು, ಶಾಲೆಗೂ ಹೋಗದೆ, ನಾಪತ್ತೆಯಾಗಿದ್ದಾರೆ.
ಮೂವರು ಶಾಲೆಗೆ ಬಾರದ ಹಿನ್ನೆಲೆಯಲ್ಲಿ ಶಿಕ್ಷಕರು(teachers) ಪೋಷಕರಿಗೆ(parents) ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಆಗ ಗಾಬರಿಗೊಂಡ ಪೋಷಕರು ಹುಡುಕಾಟ ನಡೆಸಿದ್ದಾರೆ. ರಾತ್ರಿಯಾದರೂ ಮರಳಿ ಮನೆಗೆ ಬಂದಿಲ್ಲ. ಅಲ್ಲದೇ, ಶರತ್ ಎಂಬ ವಿದ್ಯಾರ್ಥಿಯ ಬಳಿ ಮೊಬೈಲ್ ಫೋನ್ ಇದ್ದು, ಅದು ಕೂಡ ಸ್ವಿಚ್ ಆಫ್ ಆಗಿದೆ.