ವಿಜಯನಗರ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳು ನೀರು ಪಾಲಾಗಿರುವ ಘಟನೆ ನಡೆದಿದೆ.
ಈ ಘಟನೆ ವಿಜಯನಗರ (Vijayanagara) ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಮತಿ ಗ್ರಾಮದಲ್ಲಿ ನಡೆದಿದೆ. ಕುಮತಿ ಗ್ರಾಮದ ಸಾಗರ್(14), ಗುರು(14) ಹಾಗೂ ವಿನಯ್(11) ಸಾವನ್ನಪ್ಪಿದವರು.
ದಸರಾ ರಜೆ ಹಿನ್ನೆಲೆಯಲ್ಲಿ ಮೂವರು ಕೆರೆಯಲ್ಲಿ ಈಜಲು ಹೋಗಿದ್ದರು. ಈ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಕಾನಾಹೊಸಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.