ಬಳ್ಳಾರಿ: ನೀರಿನ ಹೊಂಡಕ್ಕೆ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಂದಾಲ್ ಫ್ಯಾಕ್ಟರಿಯಲ್ಲಿನ ಪೈಪ್ ಲೈನ್ ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ನೀರಿನ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್ ಸಾವನ್ನಪ್ಪಿದ್ದಾರೆ.
ಪೈಪ್‌ಲೈನ್ ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ನೀರು ರಭಸವಾಗಿ ಹರಿದಿದೆ. ನೀರಿನ ರಭಸಕ್ಕೆ ಸಿಲುಕಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ತೋರಣಗಲ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.