ರಾಯಚೂರು: ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗಿದ್ದು, ಕುರಿ ಮೇಯಿಸಲು ಹೋದ ಮಹಿಳೆ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಯಚೂರು ತಾಲೂಕಿನ ಉಡುಮಗಲ್ ಖಾನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಉಡುಮಗಲ್ ಗ್ರಾಮದ ಮಲ್ಲಮ್ಮ (50) ಮೃತ ದುರ್ದೈವಿ. ಕುರಿಗಳನ್ನು ಮೇಯಿಸಲು ಹೊಲಕ್ಕೆ ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.