ಬೆಂಗಳೂರು: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಎಲ್ಲೆಲ್ಲಿ ಯೆಲ್ಲೋ ಅಲರ್ಟ್?
ಕಲಬುರ್ಗಿ, ಧಾರವಾಡ, ಗದಗ, ಶಿವಮೊಗ್ಗ ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ರಾಯಚೂರು ಮತ್ತು ಕಲ್ಬುರ್ಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಕೋಲಾರದಲ್ಲಿ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ.


















