ಹಾವೇರಿ: ಸಾರಿಗೆ ಬಸ್‌ನಲ್ಲಿ ನಿರ್ವಾಹಕ ಇಲ್ಲದ ಹಿನ್ನೆಲೆಯಲ್ಲಿ ಚಾಲಕ ಬಸ್ ಚಾಲನೆ ಮಾಡುತ್ತಲೇ ಪ್ರಯಾಣಿಕರಿಗೆ ಟಿಕೆಟ್ ವಿತರಣೆ ಮಾಡುತ್ತಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರುದಿಂದ ರಾಣಿಬೆನ್ನೂರಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಂಡು ಬಂದಿದೆ.
ಈ ಬಸ್ ತಡೆರಹಿತ ಬಸ್ ಅಲ್ಲದಿದ್ದರೂ ಚಾಲಕನೇ ಟಿಕೆಟ್ ವಿತರಣೆ ಮಾಡುತ್ತಿರುವುದರಿಂದ ಪ್ರಯಾಣಿಕರ ಸುರಕ್ಷತೆಯ ಕುರಿತು ಸಾರ್ವಜನಿಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಪ್ರಯಾಣಿಕನೊಬ್ಬ ಈ ದೃಶ್ಯವನ್ನು ತನ್ನಮೊಬೈಲ್ ಫೋನ್‌ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನವಹಿಸಿ, ಕ್ರಮ ಕೈಗೊಳ್ಳಬೇಕೆಂದು ಪ್ರಯಾಣಿಕರ ಆಗ್ರಹಿಸಿದ್ದಾರೆ.
ಇದನ್ನೂ ಓದಿ : ನಾರ್ಕೊಟೆಕ್ ಸಿರಪ್ ಮಾರಾಟ ಮಾಡ್ತಿದ್ದ ಇಬ್ಬರ ಬಂಧನ



















